ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ.

ಸುಧೀರ್ ಬಂಗೇರ ಎಂಬಾತ ಜೂ.6ರಂದು ಕಮೆಂಟ್ ಹಾಕಿದ್ದು, ಅದರಲ್ಲಿ ಅವಹೇಳನಕಾರಿಯಾಗಿ ಓರ್ವ ದಲಿತ ಸಚಿವರ ವಿರುದ್ದ ಕಮೆಂಟ್ ಹಾಕಿರುವುದಾಗಿ ದೂರಲಾಗಿದೆ. ಸುಧೀರ ಬಂಗೇರ ಸಾಮಾಜಿಕ ಜಾಲತಾಣದಲ್ಲಿ ಸಾಮಾಜಿಕ ಶಾಂತಿ ಮತ್ತು ಸಾಮರಸ್ಯಕ್ಕೆ ಹಾನಿ ಮಾಡುವ ಚಟುವಟಿಕೆಯಲ್ಲಿ ತೊಡಗಿ ದಲಿತ ಸಚಿವರಿಗೆ ಜಾತಿ ನಿಂದನೇ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ಕಾರ್ಕಳ ನಿಟ್ಟೆ ಅತ್ತೂರಿನ ಸುರೇಶ ಚೇತನಹಳ್ಳಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಪ್ರಕರಣದ ಆರೋಪಿ ಸುಧೀರ ಬಂಗೇರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!