ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.
ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಗಣ್ಯರು ಆಸೀನರಾಗಿದ್ದರು.
ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಯುವಕನೊಬ್ಬ ಏಕಾಏಕಿ ವೇದಿಕೆ ಮೇಲೆ ಜಿಗಿದು ಸಿದ್ದರಾಮಯ್ಯ ಅವರ ಕಡೆ ಧಾವಿಸಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆ ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಕನ್ನಡ ಬಾವುಟದ ಶಾಲು ಧರಿಸಿದ್ದ ಯುವಕ, ಸಿದ್ದರಾಮಯ್ಯ ಅವರಿಗೆ ಶಾಲು ಹಾಕಲು ವೇದಿಕೆಯತ್ತ ತೆರಳಿದ್ದ, ಈ ವೇಳೆ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಶಾಲನ್ನು ಸಿದ್ದರಾಮಯ್ಯ ಅವರ ಕಡೆ ಎಸೆದ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಯುವಕ ಕನಕಪುರ ಮೂಲದವನು ಎನ್ನಲಾಗಿದೆ. ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!