ಕಡಬ, ಜೂನ್ 9: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದ ನಿವಾಸಿಯಾದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಮಾಹಿತಿ ನೀಡಿ ಪತ್ತೆಗೆ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಆರ್. ಪೈನ್ ಮೆಹತಾಬ್  ಅವರು ಜೂನ್ 7ರಂದು ಮನೆಯಿಂದ ಹೊರಗೆ ಹೋಗಿದ್ದು, ಬಳಿಕ ಮನೆಗೆ ಮರಳಿಲ್ಲ. ಸಂಬಂಧಿಕರ ಮನೆಗಳಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕುಟುಂಬದವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/2026ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ನಾಪತ್ತೆಯಾದ ಮಹಿಳೆ ಸುಮಾರು 162 ಸೆಂ.ಮೀ. ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕ ಹೊಂದಿದ್ದು, ಮನೆಯಿಂದ ಹೊರಡುವ ವೇಳೆ ನೀಲಿ ಬಣ್ಣದ ಸೀರೆ ಧರಿಸಿದ್ದರು ಎಂದು ತಿಳಿದುಬಂದಿದೆ. ಅವರು ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾರೆ.
ಈ ಚಹರೆಯ ಮಹಿಳೆ ಎಲ್ಲಿಯಾದರೂ ಕಂಡುಬಂದಲ್ಲಿ ಅಥವಾ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕಡಬ ಪೊಲೀಸ್ ಠಾಣೆ (ದೂರವಾಣಿ: 08251-260044, ಮೊಬೈಲ್: 9480805364) ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!