ಪುತ್ತೂರು, ಜೂ. 9: ಬೊಳುವಾರಿನ ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಯ ಎಲೈಡ್ ಹೆಲ್ತ್ ಸೈನ್ಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ತುರ್ತು ಚಿಕಿತ್ಸೆ (ಎಮರ್ಜೆನ್ಸಿ ಕೇರ್) ಕುರಿತ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಕಾರ್ಯಾಗಾರವನ್ನು ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಪತಿ ರಾವ್ ಉದ್ಘಾಟಿಸಿದರು. ಎ.ಜೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಜಾಬೇಜ್ ಜೆ. ಹಾಗೂ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ಪ್ರಗತಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಸೈಯ್ಯದ್ ಅಶ್ರಫ್ ಅವರು ತುರ್ತು ಪರಿಸ್ಥಿತಿಗಳಲ್ಲಿ ರೋಗಿಗಳಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ, ತುರ್ತು ಚಿಕಿತ್ಸಾ ನಿರ್ವಹಣೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಪ್ರಿತಾ ಹೆಗ್ಡೆ, ಎಲೈಡ್ ಹೆಲ್ತ್ ಸೈನ್ಸ್ ಪ್ರಾಂಶುಪಾಲೆ ಮಾನಸ, ಪಾರಾಮೆಡಿಕಲ್ ಉಪಪ್ರಾಂಶುಪಾಲೆ ಚೈತ್ರ, ನರ್ಸಿಂಗ್ ಪ್ರಾಂಶುಪಾಲೆ ಹೇಮಾಲತಾ, ಉಪನ್ಯಾಸಕ ವೃಂದ, ಪ್ರಗತಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಸಂಯೋಜಕಿ ರೇಷ್ಮಾ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿ ಸಂದೀಪ್ ಸ್ವಾಗತಿಸಿದರು. ಭಾಷಿತ ವಂದನಾರ್ಪಣೆಗೈದರು. ಚೈತ್ರ ಹಾಗೂ ಕಮರುನ್ನಿಸ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!