ಪುತ್ತೂರು: ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ , ಪ್ರಗತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ಘಟಕ ಪುತ್ತೂರು ಇವರ ಸಹಯೋಗದಲ್ಲಿ ತುಳುನಾಡಿನ ಪಾರಂಪರಿಕ ಹಬ್ಬ ‘ಪತ್ತನಾಜೆ’ ಆಚರಣೆಯ ಮಹತ್ವ ಕುರಿತು ಮಾಹಿತಿ ಕಾರ್ಯಕ್ರಮ ಮೇ 27 ರಂದು ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪೂವರಿ ಪತ್ರಿಕೆಯ ಉಪಸಂಪಾದಕಿ ಹಾಗೂ ಅಂಕಣಕಾರ್ತಿ ವಿದ್ಯಾ ಶ್ರೀಶ ವಾಸವಿ ಭಾಗವಹಿಸಿ, ತುಳುನಾಡಿನ ವಿವಿಧ ಆಚರಣೆಗಳ ಹಿಂದಿರುವ ವೈಜ್ಞಾನಿಕ ಅಂಶಗಳು ಹಾಗೂ ಪತ್ತನಾಜೆ ಹಬ್ಬದ ಸಾಂಸ್ಕೃತಿಕ ಮಹತ್ವದ ಬಗ್ಗೆ ವಿವರವಾದ ಮಾಹಿತಿ ನೀಡಿದರು. ತುಳುನಾಡಿನ ಜೀವನಶೈಲಿ ಮತ್ತು ಸಂಸ್ಕೃತಿಗೆ ಕೃಷಿಯೇ ಮೂಲವಾಗಿದ್ದು, ಬಹುತೇಕ ಆಚರಣೆಗಳು ಕೃಷಿ ಚಟುವಟಿಕೆಗಳನ್ನು ಆಧರಿಸಿ ರೂಪುಗೊಂಡಿವೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ಘಟಕದ ಅಧ್ಯಕ್ಷೆ ನಯನ ರೈ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಿದರು.
ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಕಾರ್ಯದರ್ಶಿ ಹರಿಣಾಕ್ಷಿ ಜೆ. ಶೆಟ್ಟಿ ಹಾಗೂ ಪ್ರಗತಿ ಸಂಸ್ಥೆಯ ಆಡಳಿತಾಧಿಕಾರಿ ಪ್ರೀತಾ ಹೆಗ್ಡೆ ಸಂದರ್ಭೋಚಿತವಾಗಿ ಮಾತನಾಡಿದರು.
ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ ಜಿ., ಅಲೈಡ್ ಹೆಲ್ತ್ ಸೈನ್ಸ್ ಪ್ರಾಂಶುಪಾಲೆ ಮಾನಸ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ಘಟಕದ ಕೋಶಾಧಿಕಾರಿ ವತ್ಸಲಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳಗದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿನಿ ಅಶ್ವಿತಾ ಕಾರ್ಯಕ್ರಮ ನಿರೂಪಿಸಿದರು. ಚೈತ್ರಾ ಸ್ವಾಗತಿಸಿದರು. ವಿಜಯಲಕ್ಷ್ಮಿ ಮತ್ತು ಅಂಕಿತ ಪ್ರಾರ್ಥಿಸಿದರು. ವಿದ್ಯಾರ್ಥಿ ನಾಯಕ ಸಂದೀಪ್ ವಂದಿಸಿದರು.







