ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ವೇಳೆ ಧರ್ಮಗುರು ಅಬ್ದುಲ್ ಲತೀಫ್ ಮದನಿ (50) ಅವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿಯಾಗಿರುವ ಅಬ್ದುಲ್ ಲತೀಫ್ ಮದನಿ ಅವರು ಇಂದು ಸಂಜೆ ಸುಮಾರು 4 ಗಂಟೆಯ ನಮಾಜ್ ಸಮಯದಲ್ಲಿ ಮಸೀದಿಯಲ್ಲಿ ಆಝಾನ್ ನೀಡುತ್ತಿದ್ದರು. ಇದೇ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಮೈಕ್ ಮುಂದೆಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ನೆರವಿಗೆ ಧಾವಿಸಿದರೂ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಪಾರ್ಥಿವ ಶರೀರವನ್ನು ಹೊನ್ನಾವರದಿಂದ ಅವರ ಸ್ವಗ್ರಾಮವಾದ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆಗೆ ತರಲು ವ್ಯವಸ್ಥೆ ಮಾಡಲಾಗಿದೆ. ಇಂದು ರಾತ್ರಿ ಸುಮಾರು 11 ಗಂಟೆ ವೇಳೆಗೆ ಪಾರ್ಥಿವ ಶರೀರ ಸ್ವಗೃಹಕ್ಕೆ ತಲುಪುವ ನಿರೀಕ್ಷೆಯಿದೆ.
ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!