ಪುತ್ತೂರು: ಶತಮಾನದ ಹೊಸ್ತಿಲಲ್ಲಿರುವ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ಐರಿನ್ ವೇಗಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ, ಕಲ್ಲಾರೆ ಪುತ್ತೂರು ಇದರ ಸಂಚಾಲಕ ಪ್ರವೀಣ್ ವರ್ಣಕುಟೀರಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಅವರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಹಾಗೂ ಮರಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ವಿನಯ ಸುವರ್ಣ ಉಪಸ್ಥಿತರಿದ್ದರು. ಶಿಕ್ಷಕಿ ಭಗಿನಿ ಪ್ರಿಫಿಲ್ದಾ ಸ್ವಾಗತಿಸಿದರು. ಶಿಕ್ಷಕಿ ಶಿವಪ್ರಿಯಾ ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಸ್ಕೌಟ್, ಗೈಡ್, ಕಬ್ ಹಾಗೂ ಬುಲ್‌ಬುಲ್ ಘಟಕಗಳ ಸುಮಾರು 400 ವಿದ್ಯಾರ್ಥಿಗಳು ಕಾರ್ಯಕ್ರಮದ ನೇತೃತ್ವ ವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

Leave a Reply

Your email address will not be published. Required fields are marked *

Join WhatsApp Group
error: Content is protected !!