ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ಬುಧವಾರ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಮೃತ ಮಹಿಳೆಯನ್ನು 45 ವರ್ಷದ ಸುಮಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಸುಮಾ ಅವರ ಪತಿ ರಾಜೇಶ್ ಉದ್ಯಮಿಯಾಗಿದ್ದು, ಸಾವಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಸುಮಾ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಬಸವನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದೆ.

ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಡೆತ್ ನೋಟ್ ಆಧರಿಸಿ ತನಿಖೆ ಮುಂದುವರಿಸಿದ್ದಾರೆ.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!