ಮಂಗಳೂರು: ತಮಿಳುನಾಡಿನ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷರಾದ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇಂದು ಮಧ್ಯಾಹ್ನ 1:40ರ ಸುಮಾರಿಗೆ ವಿಜಯ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಿಗಳು ಶಿಳ್ಳೆ ಹಾಗೂ ಚಪ್ಪಾಳೆಗಳ ಮೂಲಕ ಭರ್ಜರಿ ಸ್ವಾಗತ ಕೋರಿದರು.
ದಳಪತಿ ವಿಜಯ್ ಕೂಡ ಅಭಿಮಾನಿಗಳತ್ತ ಕೈ ಬೀಸಿ, ನಗುಮುಖದಿಂದ ಅವರ ಅಭಿನಂದನೆಗಳನ್ನು ಸ್ವೀಕರಿಸಿ ಉಡುಪಿಯತ್ತ ಪ್ರಯಾಣ ಬೆಳೆಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!