ಬಂಟ್ವಾಳ: ಎನ್‌ಡಿಪಿಎಸ್ (NDPS) ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಅ.ಕ್ರ. 309/2017, ಕಲಂ 8(c) ಹಾಗೂ 27(B) ಎನ್‌ಡಿಪಿಎಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ (41) ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯ ಇರುವಿಕೆಯ ಕುರಿತು ಮಾಹಿತಿ ಸಂಗ್ರಹಿಸಿದ ಠಾಣೆಯ ಸಿಬ್ಬಂದಿಗಳಾದ ಪಿಸಿ 2456 ಶ್ರೀಕಾಂತ ಹಾಗೂ ಪಿಸಿ 2468 ಅರುಣ್ ಅವರು ಜೂನ್ 12ರಂದು ವಗ್ಗ ಪ್ರದೇಶದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದರು.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!