ಪುತ್ತೂರು, ಜೂ.14: ವಿಟ್ಲ ಬ್ಲಾಕ್‌ನ ಕುಡಿಪ್ಪಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕಾಂಗ್ರೆಸ್ ಮುಖಂಡ ಅರ್ಕ ರಾಧಾಕೃಷ್ಣ ಪೂಜಾರಿ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಶಾಸಕ ಅಶೋಕ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಪ್ಪಾಡಿ ವಲಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಧೀರಜ್ ಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನಿಕಟಪೂರ್ವ ಅಧ್ಯಕ್ಷ ಕೇಶವ ಅವರನ್ನು ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ರೈ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಹಿರಿಯ ಮುಖಂಡ ರಾಧಾಕೃಷ್ಣ ಪೂಜಾರಿ, ಶೋಭಾ ಮಯ್ಯ, ವಾಸುದೇವ ಮಯ್ಯ, ಸುಬ್ರಹ್ಮಣ್ಯ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!