ಸುರತ್ಕಲ್, ಜೂ.14: ಕಾಟಿಪಳ್ಳ ನಿವಾಸಿ ಹಾಗೂ ಎಸ್‌ಡಿಪಿಐ ಮುಖಂಡ ಅಬೂಬಕರ್ ಕುಳಾಯಿ ಅವರ ಪುತ್ರ ನಿಹಾಲ್ (16) ಅವರು ರವಿವಾರ ನಿಧನರಾದರು.
ನಿಹಾಲ್ ಅವರು ಕೃಷ್ಣಾಪುರದ ನೂರುಲ್ ಹುದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದರು. ರವಿವಾರ ಬೆಳಗ್ಗೆ ಅವರಿಗೆ ಏಕಾಏಕಿ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುರತ್ಕಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಂದೆ ಅಬೂಬಕರ್ ಕುಳಾಯಿ, ತಾಯಿ, ಸಹೋದರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.







