ವಿಟ್ಲ, ಜೂ.14: ಕಂಬಳಬೆಟ್ಟು ನೆಕ್ಕರೆ ನಿವಾಸಿ ಅಬ್ಬಾಸ್ ಅವರ ಪುತ್ರ ಝುಬೈರ್ (27) ಅವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು.
ಮೂರು ವರ್ಷಗಳಿಂದ ದುಬೈಯಲ್ಲಿ ಉದ್ಯೋಗದಲ್ಲಿದ್ದ ಝುಬೈರ್ ಅವರಿಗೆ ಅಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಕೆಲ ದಿನಗಳ ಹಿಂದೆ ಊರಿಗೆ ಆಗಮಿಸಿದ್ದರು. ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಂದೆ, ತಾಯಿ, ಸಹೋದರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಝುಬೈರ್ ಅವರ ನಿಧನಕ್ಕೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದಾರೆ.







