ಬೆಳ್ತಂಗಡಿ, ಜೂ.16: ಬುರುಡೆ ಪ್ರಕರಣದ ತನಿಖೆ ಸಂಬಂಧ ತೆರಳುತ್ತಿದ್ದ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಇನೋವಾ ಕಾರು ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಎಸ್ಐಟಿ ಎಸ್ಪಿ ಸಿ.ಎ. ಸೈಮನ್, ಇನ್‌ಸ್ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಹಾಗೂ ಚಾಲಕ ಸೇರಿದಂತೆ ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ಹೈಕೋರ್ಟ್ ರಿಟ್ ಅರ್ಜಿಯ ಕುರಿತು ಚರ್ಚಿಸಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಚಾರ್ಮಾಡಿ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರಿಗೆ ಹಾನಿಯಾಗಿದೆ.

ಅಪಘಾತದ ಬಳಿಕ ಕಾರಿನಲ್ಲಿದ್ದ ಅಧಿಕಾರಿಗಳು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ತೆರಳಿ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!