ಕ ಲಬುರಗಿ: ನಗರದ ಗಂಗಾನಗರ ಪ್ರದೇಶದಲ್ಲಿ ವಾಸವಾಗಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ (ಸಿಬಿಐ) ಬಸವರಾಜ್ ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಬಸವರಾಜ್ ಅವರು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್‌ಬಿ (DCRB) ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಂಗಳವಾರ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಘಟನೆ ಪೊಲೀಸ್ ಇಲಾಖೆಯಲ್ಲಿ ಆತಂಕ ಮೂಡಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಈ ಕೃತ್ಯಕ್ಕೆ ಮುಂದಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಆರ್‌.ಜಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ. ಪಿಎಸ್‌ಐ ಬಸವರಾಜ್ ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!