ಪುತ್ತೂರು, ಜೂ. 20: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕದ ನೇತ್ರಾವತಿ ವಲಯ ಹಾಗೂ ಪುತ್ತೂರು ವಲಯದ ಆಶ್ರಯದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21ರಂದು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ ನಡೆಯಲಿದೆ.
ಕಳೆದ 46 ವರ್ಷಗಳಿಂದ ಉಚಿತ ಯೋಗ ಶಿಕ್ಷಣವನ್ನು ಸಮಾಜಕ್ಕೆ ನೀಡುತ್ತಾ ಬಂದಿರುವ ಸಮಿತಿಯು ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮವು ಬೆಳಿಗ್ಗೆ 4.50ರಿಂದ 7 ಗಂಟೆಯವರೆಗೆ ನಡೆಯಲಿದ್ದು, ಪುತ್ತೂರು ಹಾಗೂ ವಿಟ್ಲ ಭಾಗಗಳಿಂದ ಸೇರಿದಂತೆ ಸುಮಾರು 1,000ಕ್ಕೂ ಅಧಿಕ ಯೋಗಬಂಧುಗಳು ಭಾಗವಹಿಸುವ ನಿರೀಕ್ಷೆಯಿದೆ.
ಯೋಗದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!