ಪುತ್ತೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಟ್ಯಾರ್ ಬ್ರಾಂಚ್ ವತಿಯಿಂದ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಸಂಟ್ಯಾರ್ ಶಾಲೆ ಸಮೀಪ ನಡೆಯಿತು.
ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪುತ್ತೂರು, ದೇಶದಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಾ ಎಸ್‌ಡಿಪಿಐ ಮುನ್ನಡೆಯುತ್ತಿದ್ದು, ಸಂವಿಧಾನದ ಉಳಿವು ಹಾಗೂ ಸದೃಢ ಭಾರತದ ನಿರ್ಮಾಣಕ್ಕಾಗಿ ಪಕ್ಷ ಬದ್ಧತೆಯಿಂದ ಹೋರಾಟ ನಡೆಸುತ್ತಿದೆ ಎಂದು ಹೇಳಿದರು. ದೇಶದ ಸಾರ್ವಭೌಮತೆ ಹಾಗೂ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುವ ಶಕ್ತಿಗಳನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂಬ ಸಂದೇಶವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಸಂಟ್ಯಾರ್ ಬ್ರಾಂಚ್ ಅಧ್ಯಕ್ಷ ಝಕರಿಯಾ ಎಚ್.ಇ., ಕುಂಬ್ರ ಬ್ಲಾಕ್ ಉಪಾಧ್ಯಕ್ಷ ಅಶ್ರಫ್ ಎಚ್.ಇ., ಆರ್ಯಾಪು ಗ್ರಾಮ ಸಮಿತಿ ಅಧ್ಯಕ್ಷ ಬಶೀರ್ ವಾಗ್ಲೆ ಉಪಸ್ಥಿತರಿದ್ದರು.
ಸಂಟ್ಯಾರ್ ಬ್ರಾಂಚ್ ಕಾರ್ಯದರ್ಶಿ ಶಾಫಿ ಮರಿಕೆ ಸ್ವಾಗತಿಸಿ, ವಂದಿಸಿದರು.







