ಪುತ್ತೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಜೂನ್ 21ರಂದು ಭೇಟಿ ಮಾಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಂಘದ ವತಿಯಿಂದ ಹರಿಪ್ರಸಾದ್ ಅವರಿಗೆ ಸನ್ಮಾನ ಸಲ್ಲಿಸಿ, ನೂತನ ಜವಾಬ್ದಾರಿಯ ಯಶಸ್ವಿ ನಿರ್ವಹಣೆಗೆ ಶುಭ ಹಾರೈಸಲಾಯಿತು.
ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಉಪಾಧ್ಯಕ್ಷ ಚಿದಾನಂದ ಸುವರ್ಣ, ಕಾರ್ಯದರ್ಶಿ ಬಿ.ಟಿ. ಮಹೇಶ್‌ಚಂದ್ರ ಸಾಲಿಯಾನ್ ನಡುಬೈಲುಗುತ್ತು, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದ್ದಡ್ಕ ಸೇರಿದಂತೆ ಸಂಘದ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!