ಮಂಗಳೂರು, ಜೂ. 23: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಮಂಗಳವಾರ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯದಿಂದಾಗಿ ಕೆಲಕಾಲದಿಂದ ಚಿಕಿತ್ಸೆ ನಡೆಯುತ್ತಿತ್ತು.
ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ವಲಯದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆಯ ಕುರಿತು ಕುಟುಂಬದವರು ಬಳಿಕ ಮಾಹಿತಿ ನೀಡಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!