ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಧನುಷ್ (29), ಸುರಕ್ಷಾ ನಗರ, ಕುಂಪಲ ನಿವಾಸಿ ಎಂದು ಗುರುತಿಸಲಾಗಿದೆ.
ಜೂನ್ 24ರಂದು ಬೋಳಾರದ ಮುಳಿಹಿತ್ತಲು ಸಮೀಪ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಆರೋಪಿಯ ಬಳಿಯಿಂದ ಸುಮಾರು 3.32 ಗ್ರಾಂ ಎಂಡಿಎಂಎ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 131/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಹಾಗೂ 22(C) ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.






