ಕ ನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಭಾ ಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಅಕಾಲಿಕವಾಗಿ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿ ಪ್ರದೇಶದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ವೇಳೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಉಲ್ಲಾಸ್ ಗೌಡ ಅವರು ಇತ್ತೀಚೆಗೆ ಚಂದನಾ ಗೌಡ ಅವರೊಂದಿಗೆ ನಿಶ್ಚಿತಾರ್ಥಗೊಂಡಿದ್ದರು. ಕುಟುಂಬದ ಸಮ್ಮುಖದಲ್ಲಿ ಸರಳವಾಗಿ ದೀಪದ ಶಾಸ್ತ್ರ ನೆರವೇರಿಸಲಾಗಿತ್ತು. ಈ ವರ್ಷದಲ್ಲೇ ವಿವಾಹ ನಿಗದಿಯಾಗಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮದುವೆ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ಈ ದುರಂತ ಸಂಭವಿಸಿರುವುದು ಕುಟುಂಬ ಹಾಗೂ ಚಿತ್ರರಂಗದ ವಲಯದಲ್ಲಿ ಆಘಾತ ಮೂಡಿಸಿದೆ. ಭಾ ಮಾ ಹರೀಶ್ ಅವರು ಪುತ್ರನ ವಿವಾಹ ಸಂಭ್ರಮದ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿರುವುದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ಟ್ರೆಕ್ಕಿಂಗ್ ಸಮಯದಲ್ಲಿ ಉಲ್ಲಾಸ್ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ನಿರೀಕ್ಷಿಸಲಾಗುತ್ತಿವೆ.

Leave a Reply

Your email address will not be published. Required fields are marked *

Join WhatsApp Group
error: Content is protected !!