ಉಪ್ಪಿನಂಗಡಿ: 2005ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವು ಪ್ರಕರಣದಲ್ಲಿ ಸುಮಾರು 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 09/2005ರಡಿ ಭಾರತೀಯ ದಂಡ ಸಂಹಿತೆಯ 457, 380 ಹಾಗೂ 34ನೇ ಕಲಂಗಳಡಿ ದಾಖಲಾಗಿದ್ದ ಪ್ರಕರಣದ ಆರೋಪಿಯಾದ ತಮಿಳುನಾಡಿನ ತಿರುಣವೇಲಿ ನಿವಾಸಿ ಮಾಡ ಸ್ವಾಮಿ ಎಂಬಾತ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ.ಆರೋಪಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಚ್‌ಸಿ 826 ಹಾಗೂ ಎಚ್‌ಸಿ 331 ಅವರು ಕೃಷ್ಣನಗರದಲ್ಲಿ ಪತ್ತೆಹಚ್ಚಿ ಬಂಧಿಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!