ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಆಸರೆಯಾಗಲು ಬೆಂಗಳೂರಿಗೆ ಬಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ,

ಮೃತರನ್ನು ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ನಿವಾಸಿ ದೀಪಾಲಿ ಗುರು ಗೊಂಡ ಎಂದು ಗುರುತಿಸಲಾಗಿದೆ.

.ಸಹೋದ್ಯೋಗಿಗಳೊಂದಿಗೆ ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಕೆ.ಆರ್. ಪುರಂ ಸಮೀಪ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಮತ್ತೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ರಕ್ಷಿಸುವ ಗಡಿಬಿಡಿಯಲ್ಲಿದ್ದಾಗ ದೀಪಾಲಿ ಅವರಿಗೆ ಮೇಲ್ನೋಟಕ್ಕೆ ಸಣ್ಣಪುಟ್ಟ ಗಾಯಗಳಾದಂತೆ ಕಂಡಿತ್ತು. ಅಪಘಾತದ ತಕ್ಷಣ ದೀಪಾಲಿ ಅವರೇ ಸ್ವತಃ ತಂದೆಯ ಮೊಬೈಲ್ ಸಂಖ್ಯೆ ಮತ್ತು ವಿಳಾಸವನ್ನು ಅಲ್ಲಿದ್ದವರಿಗೆ ನೀಡಿದ್ದರು. ಆದರೆ, ತಲೆ ಹಾಗೂ ದೇಹದ ಒಳಭಾಗಕ್ಕೆ ತೀವ್ರ ರಕ್ತಸ್ರಾವ ಮತ್ತು ಆಂತರಿಕ ಪೆಟ್ಟಾಗಿದ್ದರಿಂದ ಕೆಲವೇ ಕ್ಷಣಗಳಲ್ಲಿ ಅವರು ಸ್ಥಳದಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ.ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದ್ದು, ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೆ.ಆರ್. ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!