ವಿಟ್ಲ: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪ್ರಸಾರವಾಗಿದ್ದ ಪೋಸ್ಟ್‌ಗೆ ‘ಸನಾತನಿ ಸಿಂಹ’ ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2025ರ ಸೆಪ್ಟೆಂಬರ್ 18ರಂದು ಅಪರಾಧ ಸಂಖ್ಯೆ 131/2025ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 353(2) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು.ತನಿಖೆಯ ಬಳಿಕ ಆರೋಪಿಯಾಗಿರುವ ಬೆಂಗಳೂರಿನ ವಿದ್ಯಮಾನ್ಯನಗರ ನಿವಾಸಿ ಆನಂದ್ ಎ. ಅವರನ್ನು ಜೂನ್ 27, 2026ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಪೊಲೀಸರ ತನಿಖೆಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ಒಟ್ಟು ಏಳು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!