ಪುತ್ತೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪ್ರಗತಿ ಗ್ರೂಪ್ ಆಫ್ ಎಜುಕೇಶನ್ ಇನ್‌ಸ್ಟಿಟ್ಯೂಷನ್ಸ್ ಹಾಗೂ ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್, ಬೊಳ್ವಾರ್, ಪುತ್ತೂರು, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (SPYSS) ನೇತ್ರಾವತಿ ವಲಯ, ಪುತ್ತೂರು ಇವರ ಸಹಯೋಗದಲ್ಲಿ ಜೂನ್ 18ರಿಂದ 20ರವರೆಗೆ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ಮಕ್ಕಳ ತಜ್ಞ ಡಾ. ಸಂದೀಪ್, ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನದಲ್ಲಿ ಅದರ ಪಾತ್ರದ ಕುರಿತು ಮಾತನಾಡಿದರು.SPYSS ಯೋಗ ತರಬೇತುದಾರ ಹೇಮಚಂದ್ರ ಅವರು ಯೋಗ, ಪ್ರಾಣಾಯಾಮ ಮತ್ತು ಧ್ಯಾನದ ಆರೋಗ್ಯಕರ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್‌ನ ಪ್ರಾಂಶುಪಾಲೆ ಪ್ರೊ. ಹೇಮಲತಾ ಜಿ ಅಧ್ಯಕ್ಷತೆ ವಹಿಸಿದ್ದರು.ಶ್ರೀಮತಿ ಅನಿತಾ ಕೆ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ರೇಶ್ಮಾ ಎಂ.ಎಸ್. ಸ್ವಾಗತಿಸಿದರು. ಶ್ರೀಮತಿ ನಹಿಮಾ ವಂದಿಸಿದರು.ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ ಈ ಕಾರ್ಯಕ್ರಮವು ಯೋಗ, ಪ್ರಾಣಾಯಾಮ ಹಾಗೂ ಧ್ಯಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!