ರಾಜ್ಯಾದ್ಯಂತ ತೆರೆಕಂಡ ‘ಅಪರಾಧಿ ನಾನಲ್ಲ’ಮಂಗಳೂರು: ಎಸ್‌ಎಲ್‌ವಿ ಕಲರ್ಸ್ ನಿರ್ಮಾಣದ, ಯಶಂತ್ ಕಲ್ಲಡ್ಕ ನಿರ್ದೇಶನದ ‘ಅಪರಾಧಿ ನಾನಲ್ಲ’ ಕನ್ನಡ ಚಲನಚಿತ್ರವು ಶುಕ್ರವಾರ (ಜುಲೈ 3) ರಾಜ್ಯಾದ್ಯಂತ ಬಿಡುಗಡೆಯಾಗಿದೆ.ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದಲ್ಲಿ ಅಮೃತ ಮೂರ್ತಿ ಹಾಗೂ ಶ್ರೀಶಾ ಸಾಮಾನಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ ಹಾಗೂ ತೆಲುಗು ಚಿತ್ರರಂಗದ ನಟಿ ಜ್ಯೋತಿ ರೈ, ಪ್ರಮೋದ್ ಶೆಟ್ಟಿ, ದಿನೇಶ್ ಮಂಗಳೂರು, ನೀತು ಶೆಟ್ಟಿ, ನವೀನ್ ಡಿ. ಪಡೀಲ್, ಅರ್ಜುನ್ ಕಜೆ, ಅನೂಪ್ ಸಾಗರ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ಬಿಡುಗಡೆಗೂ ಮುನ್ನವೇ ಚಿತ್ರದ ಟ್ರೈಲರ್ ಸಿನಿಪ್ರಿಯರ ಗಮನ ಸೆಳೆದಿದ್ದು, ವಿಭಿನ್ನ ಕಥಾಹಂದರದ ಮೂಲಕ ಕುತೂಹಲ ಮೂಡಿಸಿದೆ. ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಆರಂಭವಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!