ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು–ಉಡುಪಿ ರಸ್ತೆಯ ಕೂಳೂರು ವಿಆರ್‌ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶುಕ್ರವಾರ ಸಂಜೆ ಸುಮಾರು 6.15ರ ವೇಳೆಗೆ KA-19-HT-5288 ಸಂಖ್ಯೆಯ ಸ್ಕೂಟರ್‌ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸದಾನಂದ ಶೆಟ್ಟಿಗಾರ್ (46) ಅವರಿಗೆ, ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ KA-19-AE-0785 ಸಂಖ್ಯೆಯ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ.ಲಾರಿಯನ್ನು ಮಹಮ್ಮದ್ ಅಜರುದ್ದೀನ್ ಎಂಬವರು ಚಲಾಯಿಸುತ್ತಿದ್ದು, ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಡಿಕ್ಕಿಯ ಬಳಿಕ ಲಾರಿಯ ಚಕ್ರ ಸ್ಕೂಟರ್ ಸವಾರನ ಮೇಲೆ ಹರಿದ ಪರಿಣಾಮ ಸದಾನಂದ ಶೆಟ್ಟಿಗಾರ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!