ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದರಿಂದ, ಜಿಲ್ಲಾಧಿಕಾರಿಗಳು ಜುಲೈ 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು.ಆದರೆ, ಈ ಆದೇಶದ ನಡುವೆಯೂ ಪುತ್ತೂರಿನ ಖಾಸಗಿ ಕಾಲೇಜೊಂದರ ಪದವಿ ಪೂರ್ವ ವಿಭಾಗದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿದೆ.ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಬಿ.ಎಸ್. ಕೂಡಲಗಿ ಅವರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘನೆಯ ಕುರಿತು ಪ್ರಾಥಮಿಕ ಮಾಹಿತಿ ದೃಢಪಟ್ಟ ಹಿನ್ನೆಲೆಯಲ್ಲಿ ಕಾಲೇಜು ಆಡಳಿತಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ.ಜಿಲ್ಲಾಧಿಕಾರಿಗಳ ರಜೆ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕಿದ್ದು, ಅದರ ಉಲ್ಲಂಘನೆ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ನೋಟಿಸ್ ನೀಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!