ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ನೂತನ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಗಾಯಗೊಂಡ ಘಟನೆ ಜುಲೈ 3ರಂದು ಸಂಜೆ ಗಾಂಧಿನಗರದಲ್ಲಿ ನಡೆದಿದೆ.ಮಂಗಳೂರಿನಲ್ಲಿ ನೂತನವಾಗಿ ಖರೀದಿಸಿದ್ದ ಕಾರಿನಲ್ಲಿ ದಂಪತಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಂಧಿನಗರ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಮಹಿಳೆಗೆ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!