ಪುತ್ತೂರು ತಾಲೂಕಿನ ಇರ್ದೆ ಗ್ರಾಮದಲ್ಲಿ 18 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 6ರಂದು ನಡೆದಿದೆ.ಇರ್ದೆ ಗ್ರಾಮದ ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳ ಅವರ ಪುತ್ರ ತಿಲಕ್ (18) ಮೃತ ಯುವಕ. ಅವರು ಮಧ್ಯಾಹ್ನ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ ಗಂಗಾಧರ ಮಡಿವಾಳ, ತಾಯಿ ಮಮತಾ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.







