ಮಂಗಳೂರು, ಸೆ.16: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಮಸೀದಿಯೊಂದಕ್ಕೆ ಕಲ್ಲು ತೂರಿದ ಪ್ರಕರಣ ಸಂಬಂಧಿಸಿ ಸುರತ್ಕಲ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಕಾಟಿಪಳ್ಳದ ಮೂರನೇ ಬ್ಲಾಕ್ ವ್ಯಾಪ್ತಿಯ ಮಸ್ಜಿದುಲ್ ಹುದಾ ಜುಮ್ಮಾ ಮಸ್ಜಿದ್ ಗೆ ನಿನ್ನೆ ತಡರಾತ್ರಿ ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಾಟ ನಡೆಸಿದ್ದರು. ಕಾಟಿಪಳ್ಳ ಆಶ್ರಯ ಕಾಲನಿಯ ಭರತ್, ಅದೇ ಪ್ರದೇಶದ ನಿವಾಸಿ ಚೆನ್ನಪ್ಪ, ಹಳೆಯಂಗಡಿ ನಿವಾಸಿ ನಿತಿನ್, ಈಶ್ವರ ನಗರದ ಮನು ಮತ್ತು ಸುಜಿತ್ ಎಂಬವರು ಬಂಧಿತರು. ಭರತ್ ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಈ ಹಿಂದೆ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.

ನಿನ್ನೆ ರಾತ್ರಿ 10.30ರ ವೇಳೆಗೆ ಎರಡು ಬೈಕಿನಲ್ಲಿ ಬಂದಿದ್ದ ಯುವಕರು ಮಸೀದಿಯತ್ತ ಕಲ್ಲು ತೂರಿ ಪರಾರಿಯಾಗಿದ್ದರು. ಮಸೀದಿಯ ಕಿಟಕಿಗೆ ಬಿದ್ದಿದ್ದ ಕಲ್ಲಿನಿಂದ ಗಾಜಿನ ಗ್ಲಾಸು ಪುಡಿಯಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಪೊಲೀಸರು ಬಂದೋಬಸ್ತ್ ಮಾಡಿದ್ದರು. ಒಂದು ಬೈಕಿನಲ್ಲಿ ಮೂವರು, ಇನ್ನೊಂದರಲ್ಲಿ ಇಬ್ಬರು ಆಶ್ರಯ ಕಾಲನಿ ಕಡೆಯಿಂದ ಬಂದಿರುವುದನ್ನು ಪೊಲೀಸರು ಸಿಸಿಟಿವಿಯಲ್ಲಿ ಗಮನಿಸಿದ್ದು, ಗಣೇಶ್ ಕಟ್ಟೆ ಮೂಲಕ ಪರಾರಿಯಾಗಿದ್ದರು ಎಂಬುದನ್ನು ಪತ್ತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!