ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಜು. 8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಪ್ರಕಟನೆ ತಿಳಿಸಿದೆ.ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಚಾರಣ ಮಾರ್ಗಗಳು ಜಾರುವಂತಾಗಿದ್ದು, ಇದರಿಂದ ಚಾರಣಿಗರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಹಾಗೂ ಚಾರಣ ಮಾರ್ಗಗಳ ಸುರಕ್ಷೆ ಪರಿಶೀಲಿಸಿದ ಬಳಿಕ ನಿಷೇಧ ತೆರವುಗೊಳಿಸುವ ಸಾಧ್ಯತೆ ಇದೆ.







