ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಸರಣಿ ಕಳ್ಳತನ ಪ್ರಕರಣವನ್ನು ವಿಟ್ಲ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 38/2025, 39/2026, 41/2026, 123/2026 ಹಾಗೂ 126/2026ರಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಜಿಲ್ಲೆಯ ಚರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50) ಹಾಗೂ ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಅವರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳಿಂದ ಕಳವು ಮಾಡಲಾಗಿದ್ದ 10 ಲಾರಿ ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.







