ಬಂಟ್ವಾಳ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದ ಆರೋಪಿಯೊಬ್ಬನು ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದವನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. 204/2018ರ ಕಲಂ 379 ಐಪಿಸಿ ಪ್ರಕರಣದ ಆರೋಪಿ ಬೆಳ್ತಂಗಡಿ ನಿವಾಸಿ ರಾಜೇಶ್ (41) ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನನ್ನು ವಿಟ್ಲ ಠಾಣೆಯ ಎಎಸ್‌ಐ ಜಯರಾಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ ಹಾಗೂ ಸಿಪಿಸಿ ಶಿವಾನಂದ ಅವರು ಜುಲೈ 6ರಂದು ಮಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.







