ಪುತ್ತೂರು, ಜು. 8: ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಮಾಸಿಕ ಸಭೆಯು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ‘ಮನ್ ಕೀ ಬಾತ್’, ‘ಮಾ ಕೀ ನಾಮ್ ಏಕ್ ಪೇಡ್’ ಸೇರಿದಂತೆ ವಿವಿಧ ಸಂಘಟನಾ ಕಾರ್ಯಕ್ರಮಗಳ ಕುರಿತು ಚರ್ಚೆ ಹಾಗೂ ಅವಲೋಕನ ನಡೆಸಲಾಯಿತು.ಈ ವೇಳೆ ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಿತೀನ್ ಬೊಡ್ಡೋಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ಘೋಷಿಸಲಾಯಿತು. ಈ ಹಿಂದೆ ಯುವಮೋರ್ಚ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಿತೀನ್, ಪಕ್ಷ ವಹಿಸಿದ್ದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿ ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಿತೀನ್ ಬೊಡ್ಡೋಣಿ ಅವರ ನೇಮಕವನ್ನು ಪುತ್ತೂರು ಗ್ರಾಮಾಂತರ ಯುವಮೋರ್ಚ ಅಧ್ಯಕ್ಷ ಶಿಶಿರ್ ಪೆರ್ವೋಡಿ ಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!