ಪುತ್ತೂರು :ಕರ್ನಾಟಕ ಹವಾಮಾನ: 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್, ಭಾರಿ ಮಳೆ ಮುನ್ಸೂಚನೆ..!!ಕರ್ನಾಟಕದ ಪಶ್ಚಿಮ ಘಟ್ಟದ ಸಾಲುಗಳು ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದೆ. ಜುಲೈ 10 ರಂದು ರಾಜ್ಯದ 8 ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ 64.5 ಮಿ.ಮೀ ನಿಂದ 115.4 ಮಿ.ಮೀ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.ಭಾರತೀಯ ಹವಾಮಾನ ಇಲಾಖೆ (IMD) ಕೂಡ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ. ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಲು ಕೋರಲಾಗಿದೆ.ಎಲ್ಲೆಲ್ಲಿ ಮಳೆಯಾಗಲಿದೆ?ಐಎಂಡಿ ದತ್ತಾಂಶಗಳ ಪ್ರಕಾರ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿರಲಿದೆ. ಈ ಭಾಗದ ನದಿ ತೀರದ ನಿವಾಸಿಗಳು ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನೈಸರ್ಗಿಕ ವಿಕೋಪ ಕೇಂದ್ರವು ಈಗಾಗಲೇ ಎಚ್ಚರಿಕೆ ಸಂದೇಶ ರವಾನಿಸಿದೆಐಎಂಡಿ ಸಲಹೆ ಸೂಚನೆಗಳೇನು?ಮಳೆಯ ತೀವ್ರತೆಯ ಜೊತೆಗೆ ಕರಾವಳಿ ತೀರ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಜುಲೈ 10 ರಂದು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸೂಚನೆ ನೀಡಿದೆ.ಅಲ್ಲದೆ, ಘಾಟ್ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಕೂಡ ಮಂಜು ಮುಸುಕಿದ ವಾತಾವರಣ ಮತ್ತು ಮಳೆಯಿಂದಾಗಿ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!