ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಪ್ರದೇಶದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಸೆಲೆನ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ.ಪೊಲೀಸರ ಮಾಹಿತಿ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿಯು ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆ ಮಾಡಿದ್ದಾನೆ. ಅಲ್ಲದೆ, “ಹಿಂದಿನ ಸೀಟಿಗೆ ಬನ್ನಿ” ಎಂದು ವಿದ್ಯಾರ್ಥಿನಿಯರನ್ನು ಕರೆದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ







