ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ ಬಿ. ನಾಯ್ಕ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ಮಿತ್ತಡ್ಕ ಹಾಗೂ ಜತೆ ಕಾರ್ಯದರ್ಶಿಯಾಗಿ ದಿನೇಶ್ ಬಡಗನ್ನೂರು ಆಯ್ಕೆಯಾಗಿದ್ದಾರೆ.
ಜುಲೈ 4ರಂದು ನಡೆದ ಸಂಘದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಇದೇ ವೇಳೆ ಕಾರ್ಯಕಾರಿ ಸಮಿತಿಯ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.
ಸಂಘದ ಕಾನೂನು ಸಲಹೆಗಾರರಾಗಿ ಅನಿಕೇತನ ಲಾ ಚೇಂಬರ್ಸ್‌ನ ವಕೀಲ ಕೃಷ್ಣಪ್ರಸಾದ್ ನಡ್ಸಾರ್ ಅವರು ಮುಂದುವರಿಯಲಿದ್ದಾರೆ.
ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಪುತ್ತೂರು ಘಟಕದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.







