ಪುತ್ತೂರು, ಜು. 14: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷರಾಗಿದ್ದ ಹಾಗೂ ಕಂಬಳದ ಆಯೋಜನೆ ಮತ್ತು ತೀರ್ಪುಗಾರರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಇತ್ತೀಚೆಗೆ ನಿಧನರಾದ ನಿರಂಜನ ರೈ ಮಠಂತಬೆಟ್ಟು ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಯನ್ನು ಜು. 14ರಂದು ಆಯೋಜಿಸಲಾಗಿದೆ.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕಂಬಳ ಸಮಿತಿಯ ಸದಸ್ಯರು, ಕಂಬಳಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಸಲ್ಲಿಸುವಂತೆ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!