ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ ಹಾಗೂ ಪೊಲೀಸರ ಕಣ್ಣಪ್ಪಿಸಲು ಬುರ್ಖಾ ಧರಿಸಿ ಸಂಚರಿಸುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಇಮ್ರಾನ್ ವಿರುದ್ಧ ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳು ದಾಖಲಾಗಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಆತ ಹಾಜರಾಗಿರಲಿಲ್ಲ. ನ್ಯಾಯಾಲಯದ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ.ಬಂಧಿತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯ 2017ರ ಎರಡು ಕೊಲೆ ಯತ್ನ ಪ್ರಕರಣಗಳು, ಬರ್ಕೆ ಪೊಲೀಸ್ ಠಾಣೆಯ 2018ರ ಎರಡು ಪ್ರಕರಣಗಳು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ 2019ರ ದರೋಡೆ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ.ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!