ಪುತ್ತೂರು: ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಸಮಾಜವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ವೇದಿಕೆಯ ಪ್ರಧಾನ ಸಂಚಾಲಕ ಅಮಳ ರಾಮಚಂದ್ರ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಜುಲೈ 8ರಂದು ಪುತ್ತೂರಿನ ಪುರುಷರ ಕಟ್ಟೆಯಲ್ಲಿ ನಡೆದ ಘಟನೆಯನ್ನು ಕೆಲವರು ತಿರುಚಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಕೆಲವು ಸಂಘಟನೆಗಳು ತಪ್ಪು ಮಾಹಿತಿ ಹರಡುವ ಮೂಲಕ ಸಮಾಜದಲ್ಲಿ ಅಪನಂಬಿಕೆ, ಭಯ ಹಾಗೂ ಉದ್ವಿಗ್ನ ವಾತಾವರಣ ನಿರ್ಮಿಸಲು ಯತ್ನಿಸುತ್ತಿವೆ. ಇಂತಹ ಬೆಳವಣಿಗೆಗಳು ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ಆಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ, ಕಾನೂನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಹಸಂಚಾಲಕರಾದ ಮೌರಿಸ್ ಮಸ್ಕರೇನ್ಹಸ್, ಉಲ್ಲಾಸ್ ಕೋಟ್ಯಾನ್, ಮಹಮ್ಮದ್ ರಿಯಾಝ್ ಹಾಗೂ ಸಮಿತಿ ಸದಸ್ಯರಾದ ಝುಬೈರ್ ಪಿ.ಕೆ., ಸಲೀಂ ಮಾಯಂಗಳ, ಬಷೀರ್ ಮುಕ್ವೆ, ಜಮಾಲ್ (ಎಂ.ಜಿ.ರೋಡ್), ಮುಬೀನ್ (ಇಂದಿರಾನಗರ), ಶರೀಫ್ (ಇಂದಿರಾನಗರ) ಮತ್ತು ಚಂದ್ರಶೇಖರ ಕುರಿಂಜ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!