ಕಡಬ :ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಮಾನಹಾನಿ ಮಾಡುವ ಉದ್ದೇಶದಿಂದ ನಿರಂತರವಾಗಿ ಕಿರುಕುಳ ನೀಡುತ್ತಿರುವರೆಂದು ಬಿಳಿನೆಲೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಅವರು ಸ್ಥಳೀಯ ಮೂವರ ವಿರುದ್ಧ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಮಾರು 11 ತಿಂಗಳಿನಿಂದ ನೆಟ್ಟಣ ವಾರ್ಡ್ ನಿವಾಸಿಗಳಾದ ಪ್ರಸಾದ್ ಕೆ.ಜಿ., ಜೂಲಿಯಾನ ಹಾಗೂ ರೈಲು ನಿಲ್ದಾಣ ಸಮೀಪದ ನಿವಾಸಿ ಸಜಿತ್ ಕುಮಾರ್ ಅವರು ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಪದೇ ಪದೇ ದೂರುಗಳು, ಮಾಹಿತಿ ಹಕ್ಕು ಅರ್ಜಿಗಳು, ವಾಟ್ಸಾಪ್ ಸಂದೇಶಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮನ್ನು ಗುರಿಯಾಗಿಸಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಪಿಡಿಒ ದೂರಿನಲ್ಲಿ ತಿಳಿಸಿದ್ದಾರೆ.ದೂರಿನ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ







