ಬಂಟ್ವಾಳ, ಜು.16: ತಾಲೂಕಿನ ಶಾಂತಿ ಅಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಪಾದಚಾರಿಗಳಾದ ಫಾತಿಮಾ, ಅವರ ಪುತ್ರಿ ಸಲ್ಮೀಯಾ ಹಾಗೂ ಶೌಕತ್ ಅಲಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತದ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.







