ಬಂಟ್ವಾಳ, ಜು.16: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಅಪರಿಚಿತ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬನು ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆನ್ಯೂಸ್ ಮಾಡಿ







