ಪುತ್ತೂರು, ಜು.18: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (KUWJ) ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ, ಉಪನ್ಯಾಸ ಹಾಗೂ ಬಿ.ಟಿ. ರಂಜನ್ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಬೆಳಿಗ್ಗೆ 10.30ಕ್ಕೆ ಪುತ್ತೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿ, ಬಿ.ಟಿ. ರಂಜನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.ಈ ಸಂದರ್ಭದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಜಯ್ ಶಾಸ್ತ್ರಿ ಸಿ.ಜಿ. ಅವರು “ಆಧುನಿಕ ಮಾಧ್ಯಮ ಕ್ಷೇತ್ರದಲ್ಲಿ AI ತಂತ್ರಜ್ಞಾನ” ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿ ಖಾದರ್ ಶಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಭಾಗವಹಿಸಲಿದ್ದಾರೆ. ಜಿಲ್ಲಾ ಸಂಘದ ಕಾರ್ಯದರ್ಶಿ ಸಿದ್ದಿಕ್ ನೀರಾಜೆ ಗೌರವ ಉಪಸ್ಥಿತಿ ವಹಿಸಲಿದ್ದಾರೆ.ಈ ವರ್ಷದ ಬಿ.ಟಿ. ರಂಜನ್ ಪ್ರಶಸ್ತಿಯನ್ನು ವಿಜಯ ಕರ್ನಾಟಕದ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಅವರಿಗೆ ಪ್ರದಾನ ಮಾಡಲಾಗುತ್ತದೆ. ಇದೇ ವೇಳೆ ನೆಕ್ಕಿಲಾಡಿಯ ಪತ್ರಿಕಾ ವಿತರಕ ಇಬ್ರಾಹಿಂ ನೆಕ್ಕಿಲಾಡಿ ಅವರನ್ನು ಸನ್ಮಾನಿಸಲಾಗುತ್ತದೆ.ಕಾರ್ಯಕ್ರಮಕ್ಕೆ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!