ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಮಾಹಿತಿ ಹರಡಿದ ಆರೋಪದಡಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಬಂಟ್ವಾಳ ನಗರ ಠಾಣೆಯಲ್ಲಿ ದಾಖಲಾಗಿರುವ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ, ಭಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಿ, ಸಮಾಜದ ಶಾಂತಿ ಕದಡುವ ರೀತಿಯ ಬರಹಗಳೊಂದಿಗೆ ವಿವಿಧ ವಾಟ್ಸ್ಆಪ್ ಗುಂಪುಗಳು ಹಾಗೂ ಇನ್‌ಸ್ಟಾಗ್ರಾಂ ಖಾತೆಗಳಲ್ಲಿ ಪ್ರಸಾರ ಮಾಡಲಾಗಿದೆ.ಈ ಸಂಬಂಧ troll_master.__ ಇನ್‌ಸ್ಟಾಗ್ರಾಂ ಖಾತೆ, Yuva Belthangady, PPadmaraj Padmarajpari, Padmaraj Padmaraj Pari, Yuva Congress Belthangady ಹಾಗೂ Facts and Justice ವಾಟ್ಸ್ಆಪ್ ಗುಂಪುಗಳ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಸಂಖ್ಯೆ 96/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196 ಹಾಗೂ 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನೊಂದೆಡೆ, ಫೇಸ್‌ಬುಕ್‌ನ Shailaja Amarnath ಖಾತೆಯಲ್ಲಿ ಸಮಾಜದ ಶಾಂತಿ ಕದಡುವ ರೀತಿಯ ಸುಳ್ಳು ಪೋಸ್ಟ್ ಪ್ರಕಟಿಸಿರುವ ಆರೋಪದಡಿ ಅಪರಾಧ ಸಂಖ್ಯೆ 97/2026ರಡಿ ಪ್ರಕರಣ ದಾಖಲಿಸಲಾಗಿದೆ.ಅದೇ ರೀತಿ, Chethan Belchada ಎಂಬ ಫೇಸ್‌ಬುಕ್ ಖಾತೆಯಲ್ಲಿ ಆರೋಪಿಯ ಭಾವಚಿತ್ರವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎಂದು ಎಡಿಟ್ ಮಾಡಿ ಸುಳ್ಳು ಮಾಹಿತಿ ಹಂಚಿರುವ ಆರೋಪದಡಿ ಅಪರಾಧ ಸಂಖ್ಯೆ 98/2026ರಡಿ BNS ಕಲಂ 353(2) ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.ಈ ಮೂರು ಪ್ರಕರಣಗಳ ಸಂಬಂಧ ಬಂಟ್ವಾಳ ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!