ಪುತ್ತೂರು : ಬಹು ನಿರೀಕ್ಷಿತ ತುಳು ಚಿತ್ರ ‘ಬನ’ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಇಂದು ಅಧಿಕೃತವಾಗಿ ಘೋಷಿಸಿದೆ. ಈ ಚಿತ್ರವು ಅಕ್ಟೋಬರ್ 23ರಂದು ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.ಬಹಳ ವರ್ಷಗಳ ಬಳಿಕ ನಾಗ ಕಥೆಯನ್ನು ಆಧರಿಸಿದ ತುಳು ಚಿತ್ರವೊಂದು ತೆರೆಗೆ ಬರುತ್ತಿದ್ದು, ತುಳು ಚಿತ್ರರಂಗದ ಇತಿಹಾಸದಲ್ಲೇ ನಾಗ ಕಥಾ ಹಂದರ ಹೊಂದಿರುವ ಮೊದಲ ಚಿತ್ರ ಎಂಬ ವಿಶೇಷತೆ ‘ಬನ’ ಚಿತ್ರಕ್ಕಿದೆ. ಚಿತ್ರದ ಹೊಸ ಪೋಸ್ಟರ್ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದ್ದು, ಚಿತ್ರದ ಟ್ರೈಲರ್ ಅನ್ನು ನಾಗರ ಪಂಚಮಿ ದಿನ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.ಚಿತ್ರದ ಮತ್ತೊಂದು ವಿಶೇಷವೆಂದರೆ, ಮಾಧ್ಯಮ ಲೋಕದ ದಿಗ್ಗಜ ಜಯಪ್ರಕಾಶ್ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ತುಳು ಚಿತ್ರದಲ್ಲಿ ನಟಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದೆ ರೂಪ ವರ್ಕಡಿ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಈಶಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಮನೋಹರ್ ರೈ ವೈಪಾಲ ಅವರು ಚಿತ್ರವನ್ನು ನಿರ್ಮಿಸಿದ್ದು, ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನ ಮಾಡಿದ್ದಾರೆ. ನಾಗ ಸಂಸ್ಕೃತಿ ಮತ್ತು ಜನಪದ ಪರಂಪರೆಯನ್ನು ಒಳಗೊಂಡಿರುವ ಈ ಚಿತ್ರವು ತುಳು ಹಾಗೂ ಕನ್ನಡ ಸಿನಿಪ್ರಿಯರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!