ಸುಳ್ಯ: ಕಲ್ಲುಗುಂಡಿಯ ವಿವಾಹಿತೆ ನಿಶಾನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಮಾವ, ಅತ್ತೆ ಹಾಗೂ ನಾದಿನಿಯನ್ನು ಬಂಧಿಸಿದ್ದಾರೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ.100/2026ರ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 85, 103(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತೆಯ ಮಾವ ಸಿ.ಪಿ. ಅಳವಿ (54), ಅತ್ತೆ ಅಯಿಷಾ ಸಿ.ಎ. ಹಾಗೂ ನಾದಿನಿ ಫಸಿಲಾ ಸಿ.ಎ. (29) ಅವರನ್ನು ಜು.22ರಂದು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಸುಮಾರು ಮೂರು ದಿನಗಳ ಕಾಲ ಸತತ ತನಿಖೆ ನಡೆಸಿದ ಬಳಿಕ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.









