ಸಾರ್ವಜನಿಕ ಆರೋಗ್ಯ ರಕ್ಷಣೆ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳ ನಿಯಂತ್ರಣದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಮುಕ್ತವಾಗಿ ಆಹಾರ ನೀಡುವುದನ್ನು ನಿಯಂತ್ರಿಸಲು ಹಾಗೂ ಕಟ್ಟುನಿಟ್ಟಿನ ಮಾರ್ಗದರ್ಶಿ ಸೂತ್ರಗಳನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ .ಆರೋಗ್ಯದ ಮೇಲಾಗುವ ಭೀಕರ ಪರಿಣಾಮಗಳುಪಾರಿವಾಳಗಳ ಹಿಕ್ಕಿ (ಎಕ್ಕೆ) ಮತ್ತು ಈಕಳಗಳ ಸಂಪರ್ಕದಿಂದ ಸಾರ್ವಜನಿಕರಲ್ಲಿ, ವಿಶೇಷವಾಗಿ ಮಕ್ಕಳು, ಹಿರಿಯರು ಹಾಗೂ ಈಗಾಗಲೇ ಉಸಿರಾಟದ ತೊಂದರೆ ಇರುವವರಲ್ಲಿ ‘ಹೈಪರ್ ಸೆನ್ಸಿಟಿವಿಟಿ ನ್ಯೂಮೋನಿಟಿಸ್’ ಸೇರಿದಂತೆ ತೀವ್ರ ರೀತಿಯ ಶ್ವಾಸಕೋಶದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇವು ಶ್ವಾಸಕೋಶಕ್ಕೆ ಚೇತರಿಸಿಕೊಳ್ಳಲಾಗದಷ್ಟು ಹಾನಿ ಉಂಟುಮಾಡುತ್ತಿರುವುದನ್ನು ತಜ್ಞ ವೈದ್ಯರು ದೃಢಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಮುಖ ನಿರ್ಧಾರ ಕೈಗೊಂಡಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆಗಳಿಗೆ ನಿರ್ದೇಶನ’ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024′ ಹಾಗೂ ‘ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976’ ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ವಿವಿಧ ನಗರಗಳ ಮಹಾನಗರ ಪಾಲಿಕೆಗಳ ಆಯುಕ್ತರು ಹಾಗೂ ಮುಖ್ಯ ಅಧಿಕಾರಿಗಳಿಗೆ ಈ ಕೆಳಗಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ:

Leave a Reply

Your email address will not be published. Required fields are marked *

Join WhatsApp Group
error: Content is protected !!