ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಗುರುವಾರ (ಜು. 23)ರಿಂದ ಕಾರ್ಯಾರಂಭ ಮಾಡಿವೆ.ಮೊದಲ ಹಂತದಲ್ಲಿ ವಿಟ್ಲ, ಉಪ್ಪಿನಂಗಡಿ, ಸುಳ್ಯ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.ಕ್ಯಾಮೆರಾಗಳ ಮೂಲಕ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ಗುರುತಿಸಿ, ಸಂಬಂಧಪಟ್ಟ ವಾಹನ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ರಸ್ತೆ ಸುರಕ್ಷತೆಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.









